Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ರಸ್ತೆಯಲ್ಲಿ ಸಾಗುತ್ತಿದ್ದ ಕೇರಳ ಸಾರಿಗೆ ಬಸ್‌ನಲ್ಲಿ ಅಗ್ನಿ ಅವಘಡ!

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಸ್ ಇಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಚ್ಚರಿಕೆಯ ಕ್ರಮ ಕೈಗೊಂಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೂಡಲೇ ಕೆಳಗಿಳಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬೆಂಕಿಯಿಂದಾಗಿ ಬಸ್‌ನ ಮುಂಭಾಗ ಹಾಗೂ ಒಳ ಭಾಗ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು, ಕಂಡಕ್ಟರ್‌ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಅವಘಡದಿಂದ ದಟ್ಟ ಹೊಗೆ ಆವರಿಸಿದ್ದು, ಕೆಲ ಕಾಲ ಜನರ ಆತಂಕಕ್ಕೆ ಕಾರಣವಾಗಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.


Spread the love
Share:

administrator

Leave a Reply

Your email address will not be published. Required fields are marked *