Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ಹೊರವಲಯದಲ್ಲಿ ಅಗ್ನಿ ಅವಘಡ: ನಿಲ್ಲಿಸಿದ್ದ ರೈಲಿನ 3 ಬೋಗಿಗಳಿಗೆ ಬೆಂಕಿ!

Spread the love

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ (Fire Accident) ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಮಾಕ್ ಡ್ರಿಲ್‌ಗಾಗಿ ಬಳಸಲಾಗುತ್ತಿದ್ದ ಈ ಮೂರು ಬೋಗಿಗಳನ್ನು ಹಲವು ದಿನಗಳಿಂದ ಯಾರ್ಡ್‌ನಲ್ಲಿ ನಿಲ್ಲಿಸಲಾಗಿತ್ತು. ಬೋಗಿಗಳು ರೈಲ್ವೆ ಹಳಿಯ ಮೇಲೆ ಇರಲಿಲ್ಲ. ಅಲ್ಲದೆ, ಬೋಗಿಗಳಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಬಳಿಕ ವೇಗವಾಗಿ ವ್ಯಾಪಿಸಿದೆ. ಬೆಂಕಿಯ ಪರಿಣಾಮ ಎರಡು ಕೋಚ್‌ಗಳಿಗೆ ತೀವ್ರ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *