Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅತ್ತಾವರ ಕಟ್ಟೆಯ ಲಾಡ್ಜ್‌ನಲ್ಲಿ ಬೆಂಕಿ: ಕಿಟಕಿಯಿಂದ ಹೊರಬಂದ ದಟ್ಟ ಹೊಗೆ, ಆತಂಕ

Spread the love

ಮಂಗಳೂರು : ಅತ್ತಾವರ ಕಟ್ಟೆ ಬಳಿ ಇರುವ ವಾಣಿಜ್ಯ ಸಮುಚ್ಚಯವೊಂದರಲ್ಲಿ ಕಾರ್ಯಾಚರಿಸುತ್ತಿರುವ ಲಾಡ್ಜ್‌ನ ಕೊಠಡಿಯಲ್ಲಿ ಸೋಮವಾರ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ತೀವ್ರ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬೆಂಕಿ ಅವಘಡ ಸಂಭವಿಸಿದ ಕೊಠಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ನೆಲಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳಿರುವ ಈ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಿಂದ ಮೇಲ್ಭಾಗದಲ್ಲಿ ಲಾಡ್ಜ್ ಕಾರ್ಯಾಚರಿಸುತ್ತಿದೆ. ನಾಲ್ಕನೇ ಮಹಡಿಯಲ್ಲಿದ್ದ ಕೊಠಡಿಯೊಂದರಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಿಟಕಿಯ ಮೂಲಕ ಬೆಂಕಿಯ ಜ್ವಾಲೆ ಹಾಗೂ ದಟ್ಟ ಹೊಗೆ ಹೊರಬರುತ್ತಿರುವುದನ್ನು ಕಂಡು ಸ್ಥಳೀಯರು ಮತ್ತು ಇತರ ಕೊಠಡಿಗಳಲ್ಲಿದ್ದವರು ಆತಂಕಕ್ಕೊಳಗಾದರು. ತಕ್ಷಣವೇ ಕಟ್ಟಡದಲ್ಲಿದ್ದವರು ಕೆಳಗೆ ಓಡಿಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಠಡಿಯಲ್ಲಿದ್ದ ಹವಾನಿಯಂತ್ರಿತ ಯಂತ್ರದಿಂದ (ಎಸಿ) ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಾಹನದೊಂದಿಗೆ ಸ್ಥಳಕ್ಕೆ ಧಾವಿಸಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನವಾಜ್ ಹಾಗೂ ಠಾಣಾಧಿಕಾರಿ ಪ್ರವೀಣ್ ನೇತೃತ್ವದಲ್ಲಿ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ಪಕ್ಕದ ಕೊಠಡಿಗಳಿಗೆ ವ್ಯಾಪಿಸದಂತೆ ಸಂಪೂರ್ಣವಾಗಿ ನಂದಿಸಿದರು. ಅವಘಡದಲ್ಲಿ ಕೊಠಡಿಯಲ್ಲಿದ್ದ ಎಸಿ, ಮಂಚ, ಹಾಸಿಗೆ ಹಾಗೂ ಫ್ಯಾನ್ ಸೇರಿದಂತೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ನಷ್ಟ ಹಾಗೂ ಭಾರಿ ಅನಾಹುತ ತಪ್ಪಿದಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *