ಮಂಗಳೂರಿನ ಐಷಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ

ಮಂಗಳೂರಿನ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್‌ನ ಗಾಂಧಿನಗರ ಬಳಿ ಬುಧವಾರ ನಡೆದಿದೆ.
ಎಸಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಂಗಲೆಗೆ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಂಗಲೆಯಲ್ಲಿ ಸಮಾರಂಭ ನಡೆಯುತ್ತಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರೆಲ್ಲಾ ದಿಕ್ಕಾಪಾಲಾಗಿ ಓಡಿದ್ದಾರೆ. ಅದೃಷ್ಟವಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.