Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜನಪ್ರಿಯ ‘ಅನುಪಮಾ’ ಧಾರಾವಾಹಿ ಸೆಟ್‌ಗೆ ಬೆಂಕಿ –ತನಿಖೆ ಆರಂಭ

Spread the love

ಗೋರೆಗಾಂವ್ :ಜನಪ್ರಿಯ ಟಿವಿ ಧಾರಾವಾಹಿ ‘ಅನುಪಮಾ’ ಚಿತ್ರಿಕರಣ ಘಟಕಕ್ಕೆ ಸೋಮವಾರ ಮುಂಜಾನೆ ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಭಾರಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿಯಿಂದ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ, ಕೋಟ್ಯಂತರ ರೂಪಾಯಿಗಳ ನಷ್ಟ ಉಂಟಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಬೆನ್ನಲ್ಲೇ, ಅಖಿಲ ಭಾರತ ಚಲನಚಿತ್ರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಶ್ಯಾಮ್‌ಲಾಲ್ ಗುಪ್ತಾ ಮುಖ್ಯಮಂತ್ರಿಗೆ ಪತ್ರ ಬರೆದು , ಅಗ್ನಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ ಫಿಲ್ಮ್ ಸಿಟಿ ವ್ಯವಸ್ಥಾಪಕರು ಹಾಗೂ ಮುಂಬೈ ಕಾರ್ಮಿಕ ಆಯುಕ್ತರನ್ನು ತಕ್ಷಣ ಅಮಾನತುಗೊಳಿಸಬೇಕು ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಿ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *