Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಸ್ತೆ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನಕಾರರ ಮೇಲೆ ಫೈರಿಂಗ್

Spread the love

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್‌ಗೆ ರಸ್ತೆ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ ಅವರ ಸಂಬಂಧಿ ಫೈರಿಂಗ್​ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಲ್ ಭೇಟಿ ನೀಡಿದ್ದಾರೆ. ಚಿಕ್ಕಬಳ್ಳಾಪುರ, ಏಪ್ರಿಲ್ 23: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ (MLC YN Narayanaswamy) ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸಕಲೇಶಕುಮಾರ್ ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ರವಿ ಅವರ ದೇಹದ ಒಳಗೆ ಹೊಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರವಿ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *