Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಲೆಗಳ ಆರ್ಭಟಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ನೀಲು ಸಮುದ್ರದ ಪಾಲು

Spread the love

ಉಡುಪಿ: ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ (ನಾಡ ದೋಣಿ) ಮಗುಚಿ ಒಬ್ಬ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ.

ಪಿತ್ರೋಡಿ ನಿವಾಸಿ ನೀಲು (48) ಮೃತ ದುರ್ದೈವಿ.ದೋಣಿ ಮಗುಚಿದ ಸಂದರ್ಭದಲ್ಲಿ ನೀಲು ಅವರು ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ನೀಲು ಅವರು ಮೀನುಗಾರಿಕಾ ಬಲೆಗಳು ಮತ್ತು ಇತರ ಸಲಕರಣೆಗಳಲ್ಲಿ ಸಿಲುಕಿಹಾಕಿಕೊಂಡಿದ್ದ ಪರಿಣಾಮ ನೀರಿನಿಂದ ಹೊರಬರಲು ಸಾಧ್ಯವಾಗಲಿಲ್ಲ.ನೀಲು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *