ಲೈಫ್ ಜಾಕೆಟ್ ಧರಿಸಿದ್ದ ಮೀನುಗರಾರು ದೋಣಿ ಪಲ್ಟಿಯಲ್ಲಿ ಅಪಾಯದಿಂದ ಪಾರು

ಕುಂದಾಪುರ : ಮೀನುಗಾರಿಕೆಗೆ ತೆರಳುವ ವೇಳೆ ಲೈಫ್ ಜಾಕೆಟ್ ಎಷ್ಟುಮುಖ್ಯ ಎಂದರೂ ಅದನ್ನು ಹಾಕದೇ ಮೀನುಗಾರರು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದರೆ ಸಮುದ್ರದ ಭಾರೀ ಅಲೆಗೆ ಸಿಲುಕಿ ದೋಣಿ ಪಲ್ಟಿಯಾದರೂ ಅದರಲ್ಲಿದ್ದ ಮೀನುದಾರರೂ ಲೈಫ್ ಜಾಕೆಟ್ ಬಳಸಿದ್ದರಿಂದ ಎಲ್ಲಾ 9 ಮಂದಿ ಜೀವಂತವಾಗಿ ದಡ ಸೇರಿದ್ದಾರೆ.

ಇತ್ತೀಚೆಗೆ ಗಂಗೊಳ್ಳಿ ಹಾಗೂ ಭಟ್ಕಳದಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ದೋಣು ಮುಗುಚಿ ಹಲವು ಮೀನುಗಾರರು ಜೀವ ಕಳೆದುಕೊಂಡಿದ್ದರು. ಇಂತಹ ದುರ್ಘಟನೆ ಸಂದರ್ಭ ಮೀನುಗಾರರು ಲೈಫ್ ಜಾಕೆಟ್ ಹಾಕಿಕೊಳ್ಳದೆ ನಿರ್ಲಕ್ಷ ವಹಿಸಿ ಸಾವನ್ನು ತಂದುಕೊಂಡಿದ್ದಾರೆ.
ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಅಪ್ಪಳಿಸಿದ ಸಮುದ್ರದ ಭಾರೀ ಅಲೆಗೆ ಸಿಕ್ಕು ದೋಣಿ ಮಗುಚಿದ್ದು ಅದರಲ್ಲಿದ್ದ 9ಮೀನುಗಾರರು ಲೈಫ್ ಜಾಕೆಟ್ ಧರಿಸಿದ್ದರಿಂದ ದಡದಲ್ಲಿದ್ದ ಮೀನುಗಾರರು ನೀಡಿದ ರೋಪ್ ಹಿಡಿದು ಈಜಿ ಸುರಕ್ಷಿತವಾಗಿ ದಡ ಸೇರಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ಎಂಬಲ್ಲಿ ಭಾನುವಾರ ನಡೆದಿದೆ. ಉಪ್ಪುಂದ ಮೂಲದ ಚಂದ್ರ ಖಾರ್ವಿ, ಪ್ರಮೋದ್, ಪ್ರಜ್ವಲ್, ಗೌತಮ್, ಭಾಸ್ಕರ, ಯೋಗಿರಾಜ್, ಗೋವಿಂದ, ಬಾಬು ಖಾರ್ವಿ, ದೀಪಕ್ ಸುರಕ್ಷಿತರಾಗಿ ದಡ ಸೇರಿದ ಮೀನುಗಾರರು.
ಆಗಸ್ಟ್ 3ರಂದು ಬೆಳಗ್ಗೆ ಉಪ್ಪುಂದ ಗ್ರಾಮದ ಮಡಿಕಲ್ ಕಡಲ ತೀರದಲ್ಲಿ ಸಮುದ್ರಕ್ಕೆ ತೆರಳುತ್ತಿದ್ದರು. ಆ ಸಮಯದಲ್ಲಿ ಬೃಹತ್ ಅಲೆಗಳು ದೋಣಿಗೆ ಅಪ್ಪಳಿಸಿತು. ಕ್ಷಣಾರ್ಧದಲ್ಲಿ ದೋಣಿ ಮಗುಚಿ ಬಿದ್ದು ಮೀನುಗಾರರು ಸಮುದ್ರಕ್ಕೆ ಬಿದ್ದರು. ಮೀನುಗಾರರು ಲೈಫ್ ಜಾಕೆಟ್ ಧರಿಸಿದ್ದರಿಂದ ಅವರಿಗೆ ಈಜಲು ಸುಲಭವಾಯಿತು. ಕಡಲಾರ್ಭಟಕ್ಕೆ ದೋಣಿ ಮಗುಚಿದ್ದು, ದೋಣಿಯ ಎಂಜಿನ್ ಹಾಗೂ ದೋಣಿಗೆ ಹಾನಿ ಉಂಟಾಗಿದೆ. ದೋಣಿಯಲ್ಲಿ ಇರುವ ಬಲೆಗಳು ಸಮುದ್ರದಲ್ಲಿ ಕೊಚ್ಚಿ ಹೋಗಿ ರೂ. 5.50 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.