Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಯುರ್ವೇದ ಚಿಕಿತ್ಸೆಗಾಗಿ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

Spread the love

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ (Kenya) ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಸ್ತಂಭನದಿಂದ (Cardiac Arrest) ಇಂದು ಮುಂಜಾನೆ ನಿಧನರಾಗಿದ್ದಾರೆ.

80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ (Ayurvedic Treatment) ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು.


Spread the love
Share:

administrator

Leave a Reply

Your email address will not be published. Required fields are marked *