ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ

ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಬೀದರ್ನ ನಿನ್ನೆ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ,


ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರನ್ನು ಮನೆಗೆ ಕರೆದುಕೊಂಡು ಬಂದು ಆರೈಕೆ ಮಾಡಲಾಗುತ್ತಿತ್ತು. ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು.