Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಬಲಿಯಾದ ಮಾಜಿ ಶಾಸಕ: ₹30 ಲಕ್ಷ ಕಳೆದುಕೊಂಡ ಗುಂಡಪ್ಪ ವಕೀಲ್

Spread the love

ಬೆಂಗಳೂರು: ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ.ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಮಾಜಿ ಶಾಸಕರನ್ನು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ತಿಳಿಸಿದ ಖದೀಮರು, ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೊದಲು ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಖದೀಮರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಗುಂಡಪ್ಪ ವಕೀಲ್ ಅವರನ್ನು ಬೆದರಿಸಿದ್ದರು. ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಾ, ಕಾಲ್ ಕಟ್ ಮಾಡಬೇಡಿ ಎಂದು ಹೆದರಿಸಿದ್ದ.

ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು.ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು ಗುಂಡಪ್ಪ ವಕೀಲ್ ಅವರಿಂದ 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಖದೀಮರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಣ ಹಾಕಿಸಿಕೊಂಡು ತನಿಖೆ ಮುಗಿದ ನಂತರ ಮರಳಿ ಕೊಡುವುದಾಗಿ ಖದೀಮರು ಮಾಜಿ ಶಾಸಕರನ್ನ ನಂಬಿಸಿದ್ದರು.ಹಣ ಮರಳಿ ಬಾರದಿದ್ದಾಗ ಮಾಜಿ ಶಾಸಕ ಗುಂಡಪ್ಪ ವಕೀಲ್ ಸಿಸಿಬಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಗುಂಡಪ್ಪ ವಕೀಲ್ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *