Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು: ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್‌ನಲ್ಲಿ ಚಿಕಿತ್ಸೆ

Spread the love

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾತ್ರಿ ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್‌ ಬಲ್ಲಾಳ್‌ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬುಧವಾರ ವಾರ್ಡ್‌ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


ಹಾಸನ ದುರಂತ: ವ್ಹೀಲ್‌ಚೇರಲ್ಲಿ ಆಸ್ಪತ್ರೆಗೆ ಬಂದು ಗಾಯಗೊಂಡವನ ವಿಚಾರಿಸಿದ ಹೆಚ್‌ಡಿ ದೇವೇಗೌಡ
ತಂದೆ ದೇವೇಗೌಡರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಮಂಗಳವಾರ ಮಣಿಪಾಲ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಎಚ್‌.ಡಿ.ದೇವೇಗೌಡರ ಆರೋಗ್ಯದ ಬಗ್ಗೆ ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


Spread the love
Share:

administrator

Leave a Reply

Your email address will not be published. Required fields are marked *