Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೋಂಗಾರ್ಡ್ ಮಹಿಳೆ ಮೇಲೆ ನಾಲ್ವರು ಕಾಮುಕರ ಕೃತ್ಯ.

Spread the love

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಕಾಮುಕರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದ ಬಳಿ ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮಹಿಳೆ ಹೋಂಗಾರ್ಡ್ ಆಗಿದ್ದರು. ಸದ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಯಲಬುರ್ಗಾ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ ಪಿ. ಡಾ.ರಾಮ್ ಅರಸಿದ್ದಿ ಮಾಹಿತಿ ನೀಡಿದ್ದಾರೆ.

ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆ ಯನ್ನು ಬೈಕ್‌ ನಲ್ಲಿ ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ ನಾಲ್ವರು ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *