ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಯೋಜನೆ ಡಿಕೆಶಿ ನಿರ್ಧಾರ ಉಲ್ಟಾ ಹೊಡಿಯುತ್ತಾ

ಬೆಂಗಳೂರು:ನಗರದಲ್ಲಿಂದು ( ಜುಲೈ 11 ) 148 ಹೊಸ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಗ್ಗೆ ಈ ಕುರಿತು ಟ್ವೀಟ್ ಮಾಡಿದ್ದ ಡಿಕೆ ಶಿವಕುಮಾರ್ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಬಸ್ ಆರಂಭಿಸಲು ತೀರ್ಮಾನಿಸಿದೆ ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉಪಮುಖ್ಯಮಂತ್ರಿಯಾಗಿ ಆ ರೀತಿಯ ಸಲಹೆಯನ್ನು ಕೊಟ್ಟಿದ್ದಾರೆ, ಅದು ಮೊದಲು ಹಣಕಾಸು ವಿಭಾಗಕ್ಕೆ ಹೋಗಿ ನಂತರ ಅದರ ವೆಚ್ಚ 10 ಕೋಟಿ ಮೀರಿದರೆ ಸಂಪುಟದಲ್ಲಿ ಚರ್ಚಿಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

