ಮಹಿಳೆಯರಿಗೆ ಉಚಿತ ಬಸ್ ಸೇವೆ ಆದರೆ ಜಿಲ್ಲೆ ಬಿಟ್ಟು ಹೋದರೆ ನೀಡಬೇಕು ಹಣ

2024 ರ ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಗಳನ್ನು ಸರ್ಕಾರ ಒಂದೊಂದಾಗಿ ಈಡೇರಿಸುತ್ತಿದೆ. ವಿಶೇಷವಾಗಿ ಮಹಿಳೆಯರಿಗೆ ಅನುಕೂಲವಾಗುವ ಯೋಜನೆಗಳಲ್ಲಿ, ಉಚಿತ ಆರ್ಟಿಸಿ ಬಸ್ ಪ್ರಯಾಣವು ಪ್ರಮುಖವಾದದ್ದು. ಇದೀಗ ಈ ಕುರಿತು ಬಿಗ್ ಅಪ್ಡೇಟ್ ಹೊರ ಬಿದ್ದಿದೆ.
ಹೌದು.. ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ, ಉಚಿತ ಬಸ್ ಪ್ರಯಾಣ ಯೋಜನೆಯ ಅನುಷ್ಠಾನದ ಬಗ್ಗೆ ಅಪ್ಡೇಟ್ ನೀಡಿದ್ದಿಲ್ಲ. ಇದಕ್ಕೆ ರಾಜ್ಯದ ಮಹಿಳೆಯರಿಂದ ವಿರೋಧ ವ್ಯಕ್ತವಾಯಿತು. ಇದೀಗ ಮಹಿಳೆಯರಿಗೆ ಉಚಿತ ಆರ್ಟಿಸಿ ಬಸ್ ಪ್ರಯಾಣ ಸೌಲಭ್ಯವನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.

ಆಗಸ್ಟ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಪ್ರಾರಂಭಿಸಲು ಆಂಧ್ರ ಸರ್ಕಾರ ನಿರ್ಧರಿಸಿದೆ. ಆದರೆ, ಮಹಿಳೆಯರಿಗೆ ಉಚಿತ ಟಿಕೆಟ್ ಪ್ರಯಾಣವು ಜಿಲ್ಲಾ ಮಿತಿಯೊಳಗೆ ಮಾತ್ರ ಅನ್ವಯಿಸುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಸ್ಪಷ್ಟ ಪಡಿಸಿದ್ದಾರೆ.
ಯಾವುದೇ ಜಿಲ್ಲೆಯ ಮಹಿಳೆಯರು ಆ ಜಿಲ್ಲೆಯಲ್ಲಿ ಮಾತ್ರ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ. ಶ್ರೀಶೈಲ ಪ್ರವಾಸದ ಭಾಗವಾಗಿ ಸುನ್ನಿಪೆಂಟಾದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಚಂದ್ರಬಾಬು ಅವರು ಈ ವಿಷಯವನ್ನು ಸ್ಪಷ್ಟಪಡಿಸಿದರು. ಅಲ್ಲದೆ, ಕಲ್ಯಾಣ ಮತ್ತು ಅಭಿವೃದ್ಧಿ ತಮ್ಮ ಸರ್ಕಾರದ ಎರಡು ಕಣ್ಣುಗಳಿದ್ದಂತೆ ಎಂದು ಉಚ್ಛರಿಸಿದರು.
