ಗದಗ: ಮಣ್ಣು ತುಂಬಿದ ಟಿಪ್ಪರ್ಗೆ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದಾರುಣ ಸಾ*ವು!

ಗದಗ: ಮಣ್ಣು ತುಂಬಿದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ (Bike Accident) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ (Gadag) ಕ್ರಾಸ್ ಬಳಿ ನಡೆದಿದೆ.

65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತ ದುರ್ದೈವಿಗಳು. ಮೃತರು ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ನಿವಾಸಿಗಳು.
ರೋಣದಿಂದ ಗಜೇಂದ್ರಗಡ ಕಡೆಗೆ ಅಕ್ರಮವಾಗಿ ಮಣ್ಣು ತುಂಬಿಕೊಂಡು ಅತಿವೇಗವಾಗಿ ಟಿಪ್ಪರ್ ಹೊರಟಿತ್ತು. ಇಟಗಿಯಿಂದ ಹೊಸಳ್ಳಿ ಕಡೆಗೆ ಬೈಕ್ ಸವಾರರು ಹೊರಟಿದ್ದರು. ಈ ವೇಳೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರ್ ಸಹ ಪಲ್ಟಿ ಹೊಡೆದಿದೆ. ಟಿಪ್ಪರ್ ಚಾಲಕ ವಾಹನ ಅಲ್ಲೇ ಬಿಟ್ಟು ಪರಾರಿ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.