ಮಧ್ಯಪ್ರದೇಶದಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ – ಮದುವೆ ನಿಶ್ಚಿತ ವ್ಯಕ್ತಿಯೊಡನೆ ಹೊರಗೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಕೃತ್ಯ

ಸಿಧಿ: ತಾನು ಮದುವೆಯಾಗಬೇಕಿದ್ದ ಹುಡುಗನ ಜತೆ ಹೊರಗೆ ಹೋಗಿದ್ದ ಯುವತಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಜತೆಗಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದು, ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅರವಿಂದ್ ಶ್ರೀವಾಸ್ತವ ಪಿಟಿಐಗೆ ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಚುರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತೆ ಮಂಗಳವಾರ ಮದುವೆ ನಿಶ್ಚಯವಾಗಿದ್ದ ಹುಡುಗನೊಂದಿಗೆ ಹೊರಗೆ ಹೋಗಿದ್ದರು. ಕಥೌಥಾ ಬಳಿಯ ರಸ್ತೆಬದಿಯಲ್ಲಿ ತಮ್ಮ ಮೋಟಾರ್ ಸೈಕಲ್ ನಿಲ್ಲಿಸಿದ ನಂತರ, ಅವರು ಹತ್ತಿರದ ಬೆಟ್ಟಕ್ಕೆ ಹೋಗಿದ್ದರು.
ಆ ಪ್ರದೇಶದಲ್ಲಿ ಓಡಾಡುತ್ತಿದ್ದ ನಾಲ್ವರು ಇವರನ್ನು ಗಮನಿಸಿದ್ದರು, ಅವರು ಆ ಹುಡುಗನನ್ನು ಹೊಡೆದು, ಓಡಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಆರೋಪಿಗಳ ಹಿಡಿತದಿಂದ ತಪ್ಪಿಸಿಕೊಂಡ ನಂತರ, ಯುವತಿ ತನ್ನ ಹುಡುಗನನ್ನು ಸಂಪರ್ಕಿಸಿದ್ದಾಳೆ.ಕೂಡಲೇ ಇಬ್ಬರು ಸೇರಿ ಪೊಲೀಸ್ ಠಾಣೆಗೆ ತೆರಳು ದೂರು ದಾಖಲಿಸಿದ್ದಾರೆ.
ಇಬ್ಬರ ದೂರಿನ ಮೇರೆಗೆ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು ಚಿಕಿತ್ಸೆಗಾಗಿ ಸೆಮಾರಿಯಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಘಟನೆಯ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು, ಈ ಅಪರಾಧವು ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಮಾತನಾಡಿ, ಈ ನಾಚಿಕೆಗೇಡಿನ ಘಟನೆ ಇಡೀ ಮಾನವೀಯತೆಯನ್ನು ಕಳಂಕಿತಗೊಳಿಸುತ್ತದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಭಯಾನಕ ಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿಯೇ, ಮಧ್ಯಪ್ರದೇಶದಲ್ಲಿ ದಲಿತ ಮತ್ತು ಬುಡಕಟ್ಟು ಮಹಿಳೆಯರ ಮೇಲೆ 7,418 ಅತ್ಯಾಚಾರ ಘಟನೆಗಳು, 338 ಸಾಮೂಹಿಕ ಅತ್ಯಾಚಾರಗಳು ಮತ್ತು 558 ಕೊಲೆಗಳು ದಾಖಲಾಗಿವೆ. ಸರಾಸರಿ, ಪ್ರತಿದಿನ ಏಳು ದಲಿತ ಅಥವಾ ಬುಡಕಟ್ಟು ಹೆಣ್ಣುಮಕ್ಕಳು ಈ ಕ್ರೌರ್ಯಕ್ಕೆ ಬಲಿಯಾಗುತ್ತಿದ್ದಾರೆ ಎಂದರು.
