ಸುರತ್ಕಲ್ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ-2 ಕಾರ್ಮಿಕರ ದಾರುಣ ಸಾವು

ಮಂಗಳೂರು: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
