Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಳೆಯಬ್ಬರಕ್ಕೆ ಸಿದ್ಧರಾಗಿ: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರವರೆಗೂ ಭಾರೀ ಮಳೆ!

Spread the love

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಕೂಡ ಮಳೆಯಾಗಲಿದೆ.

ಕುಮಟಾ, ಗದಗ, ಅಣ್ಣಿಗೆರೆ, ಔರಾದ್, ಉಡುಪಿ, ಗೋಕರ್ಣ, ಹಗರಿಬೊಮ್ಮನಹಳ್ಳಿ, ಕುಂದಾಪುರ, ಪರಶುರಾಂಪುರ, ಅಂಕೋಲಾ, ಬಾದಾಮಿ, ಕ್ಯಾಸಲ್​​ರಾಕ್, ಚಿಂಚೋಳಿ, ಚಿತ್ರದುರ್ಗ, ಧಾರವಾಡ, ಗೇರುಸೊಪ್ಪ, ಕಳಸ, ಕಾರವಾರ, ಕೋಟಾ, ಕೊಟ್ಟಿಗೆಹಾರ, ಕೃಷ್ಣರಾಜಸಾಗರ, ಕುರ್ಡಿ, ಮಂಗಳೂರು, ಮಂಠಾಳ, ಮುಂಡಗೋಡು, ಮುನಿರಾಬಾದ್, ನಾಯಕನಹಟ್ಟಿ, ಶಿರಹಟ್ಟಿ, ಸಿದ್ದಾಪುರ, ಸಿಂದಗಿ, ಸೋಮವಾರಪೇಟೆ, ವಿಜಯಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಇಂದೂ ಕೂಡ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 28.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 26.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *