ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ ಕೇಸ್ ನಲ್ಲಿನ ಬಾಲಕಿ ಮೃತದೇಹ

ಬೆಂಗಳೂರು: ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆಯಾಗಿರುವ ಘಟನೆ ಬುಧವಾರ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರೋ ರೈಲ್ವೆ ಬ್ರಿಡ್ಜ್ ಬಳಿ ಸುಮಾರು ಹತ್ತು ವರ್ಷ ವಯಸ್ಸಿನ ಬಾಲಕಿ ಮೃತ ದೇಹ ಪತ್ತೆಯಾಗಿದೆ.
ಚಲಿಸುವ ರೈಲಿನಿಂದ ಬಾಲಕಿಯನ್ನು ಶವವನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರಿಂದ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಯಪ್ಪನ ಹಳ್ಳಿ ರೈಲ್ವೇ ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆ ಹಾಗೂ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.