ಜಾಗತಿಕ ತಲ್ಲಣ: ಇರಾನ್-ಇಸ್ರೇಲ್ ಸಂಘರ್ಷದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆ!

ಹೊಸದಿಲ್ಲಿ: ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಗಮನಾರ್ಹ ಏರಿಕೆ ಕಂಡಿವೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ವ್ಯಾಪಾರ ವಲಯದಲ್ಲಿ ಆತಂಕ ಹೆಚ್ಚಿದ್ದು, ತೈಲ ಬೆಲೆಗಳು ಏರಿಕೆಯಾಗಿವೆ.
ಜಾಗತಿಕ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 3.63ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ 96.75 ಡಾಲರ್ ಗೆ ತಲುಪಿದೆ. ಇದೇ ವೇಳೆ, ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲದ ಬೆಲೆಯೂ ಶೇ. 3.35ರಷ್ಟು ಹೆಚ್ಚಳಗೊಂಡು ಪ್ರತಿ ಬ್ಯಾರೆಲ್ಗೆ 93.89 ಡಾಲರ್ ಗೆ ಏರಿಕೆಯಾಗಿದೆ.
ಮಧ್ಯಪ್ರಾಚ್ಯವು ಜಾಗತಿಕ ತೈಲ ಪೂರೈಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರದೇಶವಾಗಿದ್ದು, ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡರೆ ತೈಲ ಉತ್ಪಾದನೆ ಮತ್ತು ಸಾಗಣೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ತೈಲ ಬೆಲೆಗಳಲ್ಲಿ ಮತ್ತಷ್ಟು ಏರಿಳಿತ ಕಂಡುಬರುವ ಸಾಧ್ಯತೆ ಇದೆ ಎಂದು Aljazeera ವರದಿ ಮಾಡಿದೆ.
