ಗೋವಾ ಸಿಎಂ ಪ್ರಮೋದ್ ಸಾವಂತ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ

ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದು ಒಂದು ದಿನದ ಉಡುಪಿ ಪ್ರವಾಸವನ್ನು ಕೈಗೊಂಡಿದ್ದಾರೆ. ಸಾವಂತ್ ಅವರನ್ನು ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು.


ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಮೂಕಾಂಬಿಕೆಯ ದರ್ಶನಗೈದರು. ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾದರು. ವಿಶೇಷ ಪೂಜೆ ನೆರವೇರಿಸಿ ಇತರೆ ಎರಡು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗೋವಾಕ್ಕೆ ವಾಪಸ್ ಆಗಿದ್ದಾರೆ.