ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ಅಪಘಾತ ಪರಿಹಾರ, ಅಂತ್ಯಕ್ರಿಯೆ ವೆಚ್ಚ ದುಪ್ಪಟ್ಟು ಹೆಚ್ಚಳ!

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ನೀಡುವ ಅಪಘಾತ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ಸಹಾಯಧನವನ್ನು ಸರ್ಕಾರ ಹೆಚ್ಚಳ ಮಾಡಿದೆ.

ನೋಂದಾಯಿತ ಫಲಾನುಭವಿಗಳು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮರಣ ಹೊಂದಿದಲ್ಲಿ ನೀಡಲಾಗುತ್ತಿದ್ದ 5 ಲಕ್ಷ ರೂ.
ಪರಿಹಾರವನ್ನು 8 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಮರಣ ಹೊಂದಿದಾಗ ನೀಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹ ರಾಶಿ ಸಹಾಯಧನ ಮೊತ್ತವನ್ನು 75,000 ರೂ.ನಿಂದ 1.50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ. ಭಾರತಿ ತಿಳಿಸಿದ್ದಾರೆ.
