Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಂಚಾರ ದಂಡ ರಿಯಾಯಿತಿಗೆ ಉತ್ತಮ ಪ್ರತಿಕ್ರಿಯೆ: 3 ವಾರದಲ್ಲಿ ₹16.63 ಕೋಟಿ ಸಂಗ್ರಹ

Spread the love

ಬೆಂಗಳೂರು: ರಾಜ್ಯ ಸರ್ಕಾರ ವಾಹನ ಸವಾರರಿಗೆ ಶೇ.50ರಷ್ಟು ದಂಡ ಪಾವತಿಸಲು (Traffic Fine) ಅವಕಾಶ ನೀಡಿದ ಬೆನ್ನಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ ರೂ. ದಂಡ ಸಂಗ್ರಹವಾಗಿದೆ.

ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿ, ನ.21ರಿಂದ ಡಿ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಲು ರಿಯಾಯಿತಿ ಆದೇಶ ಹೊರಡಿಸಿತ್ತು. ಅದರಂತೆ ಕಳೆದ ಮೂರು ವಾರಗಳ ಅವಧಿಯಲ್ಲಿ 16.63 ಕೋಟಿ ರೂ. ದಂಡ ಸಂಗ್ರಹಗೊಂಡಿದ್ದು, ಬರೋಬ್ಬರಿ 5,88,127 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಇತ್ಯರ್ಥಗೊಂಡಿವೆ

ಈಗಾಗಲೇ ಜನರಿಂದ ಉತ್ತಮ ಸ್ಪಂದನೆ ದೊರಕಿದ್ದು, ಡಿ.12ರವರೆಗೆ 50% ದಂಡ ಪಾವತಿಗೆ ಅವಕಾಶವಿದೆ. ಆನ್‌ಲೈನ್ ಪೇಮೆಂಟ್‌ಗಳಾದ ಕೆಎಸ್‌ಪಿ, ಬಿಟಿಪಿ, ಬೆಂಗಳೂರು ಒನ್, ಕರ್ನಾಟಕ ಒನ್, ಟ್ರಾಫಿಕ್ ಪೊಲೀಸರ ಬಳಿಯೂ ತಮ್ಮ ದಂಡದ ರಿಯಾಯಿತಿ ಮೊತ್ತವನ್ನು ಜನ ಪಾವತಿಸಬಹುದು. ಡಿ.12ರ ಬಳಿಕ ಪೂರ್ಣ ಪ್ರಮಾಣದಲ್ಲಿ ದಂಡ ಪಾವತಿಸಬೇಕಾಗುತ್ತದೆ.

ಇದಕ್ಕೂ ಮುನ್ನ ಆ.23ರಿಂದ ಸೆ.12ರವರೆಗೂ ದಂಡದ ಶೇ.50ರಷ್ಟನ್ನು ಪಾವತಿಸಲು ಅವಕಾಶ ನೀಡಿತ್ತು. ಈ ವೇಳೆ ಬೆಂಗಳೂರು ಒಂದರಲ್ಲೇ 55 ಕೋಟಿ ರೂ.ಗೂ ಹೆಚ್ಚು ದಂಡ ಸಂಗ್ರಹವಾಗಿತ್ತು


Spread the love
Share:

administrator

Leave a Reply

Your email address will not be published. Required fields are marked *