ಗೂಡ್ಸ್ ವಾಹನ ಡಿಕ್ಕಿ: ಸೈಕಲ್ ಸವಾರ ಬಾಲಕ ಸಾವು

ಗೂಡ್ಸ್ ವಾಹನ ಡಿಕ್ಕಿಯಾಗಿ ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಶಾಂಕ್ (12) ಮೃತ ಬಾಲಕ. ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಕೆಳಗ ಬಿದ್ದ ಬಾಲಕನ ಮೇಲೆಯೇ ವಾಹನ ಹರಿದು ಹೋಗಿದೆ.
ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಾಮಾಕ್ಷಿಪಾಳ್ಯದ ತೋಟದ ರಸ್ತೆಯಲ್ಲಿರುವ ಸಣ್ಣಕ್ಕಿಬೈಲಿನಲ್ಲಿ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಗೂಡ್ಸ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.