Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹಲ್ಲಿನ ರೂಟ್ ಕೆನಾಲ್ ಚಿಕಿತ್ಸೆಗೂ ಇನ್ಮುಂದೆ ಸರ್ಕಾರಿ ವಿಮೆ ಲಭ್ಯ!

Spread the love

ಬೆಂಗಳೂರು: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್​​ ನ್ಯೂಸ್​​ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್​​ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಹಲ್ಲಿನ ರೂಟ್ ಕೆನಾಲ್  ಚಿಕಿತ್ಸೆ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದಂತ ಚಿಕಿತ್ಸೆಯನ್ನೂ ಈ ಯೋಜನೆಯಡಿ ಫಲಾನುಭವಿಗಳು ಮಾಡಿಸಿಕೊಳ್ಳಬಹುದಾಗಿದ್ದು, ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡುವ ಮೂಲಕ ಸ್ವತಃ ಆರೋಗ್ಯ ಸಚಿವ ದಿನೇಶ್​​ ಗುಂಡೂರಾವ್​​ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.ಸಾರ್ವಜನಿಕ ಆರೋಗ್ಯ ಸೇವೆಯನ್ನು ಹಂತ ಹಂತವಾಗಿ ಬಲಪಡಿಸುವ ದಿಸೆಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆ ಎಂದಿರುವ ಸಚಿವರು, ಈ ಯೋಜನೆ ಮುಂಭಾಗ (Anterior) ಮತ್ತು ಹಿಂಭಾಗ (Posterior) ಹಲ್ಲುಗಳ ರೂಟ್ ಕೆನಾಲ್  ಚಿಕಿತ್ಸೆಯನ್ನೂ ಒಳಗೊಂಡಿದ್ದು, ರಾಜ್ಯದಾದ್ಯಂತ ಸಮಯೋಚಿತ, ಕೈಗೆಟುಕುವ ಹಾಗೂ ಗುಣಮಟ್ಟದ ದಂತ ಆರೋಗ್ಯ ಸೇವೆಗಳನ್ನು ಒದಗಿಸಲು ಇದು ನೆರವಾಗಲಿದೆ. CGHS ಟಿಯರ್-3 ಮಾನದಂಡದ ಪ್ಯಾಕೇಜ್ ದರಗಳು ಮತ್ತು ಸ್ಪಷ್ಟ ಕ್ಲಿನಿಕಲ್ ವರ್ಗೀಕರಣದೊಂದಿಗೆ, ಚಿಕಿತ್ಸೆಗಳಲ್ಲಿ ಏಕತೆಯನ್ನು ತರಲು ಇದು ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ಜಾರಿಗೆ ತರಲಾಗುತ್ತಿರುವ ಈ ಪ್ಯಾಕೇಜ್‌  ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ರೀತಿಯ ವೆಚ್ಚಗಳನ್ನು ಒಳಗೊಂಡಿದ್ದು, ರೋಗಿಗಳು ಹೆಚ್ಚುವರಿ ಶುಲ್ಕಗಳನ್ನು ಭರಿಸಬೇಕಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *