Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇಂದಿನಿಂದ ಜಾರಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ: ಓಸಿ ಸರ್ಟಿಫಿಕೆಟ್ ಕಡ್ಡಾಯ

Spread the love

ಬೆಂಗಳೂರು: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ಬಂದಿದೆ. ಇಡೀ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾವಣೆ ಆಗಲಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ  ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ. ಸ್ವಾಧೀನನಾನುಭಾವ ಪತ್ರ ಇಲ್ಲದಿದ್ದರೆ ಸಂಪರ್ಕ ಸಿಗುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್​ರಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಸುಪ್ರಿಂಕೋರ್ಟ್ ಆದೇಶದಂತೆ ಓಸಿ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಬೆಂಗಳೂರಿನ ‘ಎ’ ಖಾತಾ ಹಾಗೂ ‘ಬಿ’ ಖಾತಾ ನಿವೇಶನವಾಗಿರಲಿ ಕಡ್ಡಾಯವಾಗಿ ಪ್ರಮಾಣ ಪತ್ರ ಪಡೆಯಬೇಕು. ಈಗಾಗಲೇ ವಿದ್ಯುತ್ ಸಂಪರ್ಕಕ್ಕಾಗಿ ಸುಮಾರು 66 ಸಾವಿರದ 400 ಅರ್ಜಿಗಳು ಸಲ್ಲಿಸಲಾಗಿದೆ. ಅವರಿಗೆಲ್ಲ ಬಿಬಿಎಂಪಿ ಸಿಬ್ಬಂದಿಯೇ ಕರೆ ಮಾಡಿ ಬೇಕಾದ ದಾಖಲೆ ಪಡೆಯಲಿದ್ದಾರೆ. ಇನ್ಮುಂದೆ ಮನೆ ಕಟ್ಟುವ ಮುಂಚೆ ಓಸಿ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ಆದೇಶ ಪತ್ರದಲ್ಲೇನಿದೆ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂಗೆ ವಿದ್ಯುತ್ ಸಂಪರ್ಕ ಕೋರಿ ಸುಮಾರು 66,400 ಸಂಪರ್ಕಗಳಿಗಾಗಿ ಅರ್ಜಿಗಳು ಸಲ್ಲಿಕೆಯಾಗಿದೆ. ಸುಪ್ರಿಂಕೋರ್ಟ್ ಆದೇಶದಂತೆ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಮತ್ತು ನೀರು ಸರಬರಾಜು, ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ.

ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ, ಸಲ್ಲಿಸುವ ವಿವರಗಳನ್ನು ಪಡೆಯಲು ಬಿಬಿಎಂಪಿಯಿಂದ ಎಸ್​​ಎಂಎಸ್​ ಮತ್ತು ದೂರವಾಣಿ ಕರೆ ಮುಖಾಂತರ ವಿದ್ಯುತ್ ಸಂಪರ್ಕಕ್ಕಾಗಿ ಬಾಕಿ ಇರುವ ಅರ್ಜಿದಾರರನ್ನು ಸಂಪರ್ಕಿಸಲಾಗುತ್ತದೆ.

ಬಿಬಿಎಂಪಿ ಕೋರುವ ಮಾಹಿತಿಯನ್ನು ಒದಗಿಸಲು ಹಾಗೂ ಈ ಕೆಳಕಂಡ ಆನ್‌ಲೈನ್ ಲಿಂಕ್‌ನಲ್ಲಿ ನೊಂದಾಯಿತ ಎಂಜಿನಿಯರ್​ಗಳ ಮುಖಾಂತರ ಸ್ವಾಧೀನಾನುಭವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಂತೆ ಬೆಂಗಳೂರು ನಾಗರೀಕರನ್ನು ಕೋರಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *