Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಕಿರುಕು*ಳ: ಕಾಮುಕನಿಗೆ ತಕ್ಕ ಪಾಠ ಕಲಿಸಿದ ಮಹಿಳೆ ಮತ್ತು ಚಾಲಕ

Spread the love

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಮೇಲಿನ ಕಿರುಕುಳದ ಘಟನೆಗಳು ಆಗಾಗ್ಗೆ ಕೇಳಿಬರುತ್ತಲೇ ಇರುತ್ತವೆ. ಆದರೆ, ಈ ಬಾರಿ ಕಿರುಕುಳ ನೀಡಿದ ಕಾಮುಕನಿಗೆ ಬಸ್‌ನಲ್ಲೇ ಮಹಿಳೆ ಮತ್ತು ಚಾಲಕ ಸೇರಿ ತಕ್ಕ ಪಾಠ ಕಲಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೊದ ಪ್ರಕಾರ, ಬಿಎಂಟಿಸಿ 500D/40 ಮಾರ್ಗದ ಬಸ್‌ನಲ್ಲಿ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ಸಂಚರಿಸುತ್ತಿದ್ದ ವೇಳೆ ಮಹಿಳಾ ಪ್ರಯಾಣಿಕೆಗೆ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಇದರಿಂದ ಆಕ್ರೋಶಗೊಂಡ ಮಹಿಳೆ ಕೂಡಲೇ ಬಸ್ ಚಾಲಕರಿಗೆ ವಿಷಯ ತಿಳಿಸಿದ್ದು, ಆರೋಪಿಯು ಬಸ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಚಾಲಕ ಬಸ್ ನಿಲ್ಲಿಸಿ ಎರಡೂ ಬಾಗಿಲುಗಳನ್ನು ಮುಚ್ಚಿದ್ದಾರೆ.
ಆ ಬಳಿಕ ಮಹಿಳೆ ಆರೋಪಿಗೆ ಧರ್ಮದೇಟು ನೀಡಿದ್ದು, ಬಸ್ ಚಾಲಕ ಕೂಡ ಆರೋಪಿಗೆ ಕಾಲಿನಿಂದ ಒದ್ದು ಹಿಡಿದುಕೊಂಡಿರುವ ದೃಶ್ಯ ವಿಡಿಯೊದಲ್ಲಿ ಕಂಡು ಬಂದಿದೆ.
ಚಾಲಕ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದರೂ, ಮತ್ತೆ ಎದ್ದು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಇದಲ್ಲದೆ, ಬಸ್‌ನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರೂ “ಇಂತಹವರಿಗೆ ಶಿಕ್ಷೆ ಆಗಬೇಕೆಂದು” ಎಂದು ಹೇಳುತ್ತಿರುವುದು ಕೇಳಿಬಂದಿದೆಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ, ಈ ವ್ಯಕ್ತಿ ಹೆಬ್ಬಾಳ–ಮಾನ್ಯತಾ ಟೆಕ್ ಪಾರ್ಕ್ ಮಾರ್ಗದ ಬಿಎಂಟಿಸಿ ಬಸ್‌ಗಳಲ್ಲಿ ಪದೇ ಪದೇ ಪ್ರಯಾಣಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಇದೇ ವ್ಯಕ್ತಿ ಕಂಡುಬಂದರೆ ಬಸ್ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಘಟನೆ ಕುರಿತು ಬೆಂಗಳೂರು ನಗರ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಬಿಎಂಟಿಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಆರೋಪಿತ ವ್ಯಕ್ತಿ ಮಾನ್ಯತಾ ಟೆಕ್ ಪಾರ್ಕ್ ಬಸ್ ನಿಲ್ದಾಣದಲ್ಲಿ ಇಳಿದಿದ್ದರೆ, ಮಹಿಳೆ ಬಾಬುಸಪಾಳ್ಯ ಬಸ್ ನಿಲ್ದಾಣದಲ್ಲಿ ಇಳಿದಿದ್ದಾರೆ. ಈವರೆಗೆ ಯಾವುದೇ ಅಧಿಕೃತ ಪೊಲೀಸ್ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಮಹಿಳೆಯರ ಮೇಲೆ ಕಿರುಕುಳ ಅಥವಾ ಅನುಚಿತ ವರ್ತನೆ ನಡೆದರೆ, ತಕ್ಷಣವೇ ಬಸ್ ಸಿಬ್ಬಂದಿಗೆ ಮಾಹಿತಿ ನೀಡಿ, ಸಾಧ್ಯವಾದರೆ ಸಾಕ್ಷ್ಯ ಸಂಗ್ರಹಿಸಿ ಪೊಲೀಸರಿಗೆ ದೂರು ನೀಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಘಟನೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.


Spread the love
Share:

administrator

Leave a Reply

Your email address will not be published. Required fields are marked *