Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

Spread the love

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ಟ್ರ್ಯಾಕ್ಟರ್ ಹತ್ತಿದ್ದ ರಾಜು, ಪೂಜೆ ಸಲ್ಲಿಸುತ್ತಾ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹುಣಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತು.

ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಗಣೇಶನ ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ, ನೇರವಾಗಿ ಚಿಕ್ಕ ಕೆರೆಯಲ್ಲಿ ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆ‌ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *