ಹರ್ಯಾಣದ ಮಾಡೆಲ್ ಶೀತಲ್ ಕೊಲೆ ಶಂಕೆ: ಶವ ಕಾಲುವೆಯಲ್ಲಿ ಪತ್ತೆ

ಚಂಡೀಗಢ: ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ಮೂಲದ ಮಾಡೆಲ್ನ ಶವ ಪತ್ತೆಯಾಗಿದೆ.
ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವ ಪತ್ತೆಯಾಗಿದ್ದು ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 14 ರಂದು ಮಾಡೆಲ್ ಶೂಟಿಂಗ್ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಮರಳಿ ಮನೆಗೆ ಬಾರದೇ ಇದ್ದಾಗ ಸಹೋದರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ತನಿಖೆಗೆ ಇಳಿದ ಪೊಲೀಸರಿಗೆ ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣವು ಪ್ರಾದೇಶಿಕ ಮನರಂಜನಾ ಉದ್ಯಮದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.