Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಸನ: ಜೀಪ್-ಬೈಕ್ ಅಪಘಾತ; ಎಲ್.ಎಲ್.ಬಿ ವಿದ್ಯಾರ್ಥಿ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Spread the love

ಹಾಸನ: ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಎಲ್‍ಎಲ್‍ಬಿ ವಿದ್ಯಾರ್ಥಿ (LLB Student)ಸಾವನ್ನಪ್ಪಿದ ಘಟನೆ ಬೇಲೂರು (Beluru) ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ.

ಗ್ರಾಮದ ಚಂದನ್ (22) ಮೃತ ಯುವಕ ಎಂದು ತಿಳಿದು ಬಂದಿದೆ. ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಭರತ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್‌ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಚಂದನ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ


Spread the love
Share:

administrator

Leave a Reply

Your email address will not be published. Required fields are marked *