Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಸನ: ಶಾಲಾ ಬಾಲಕಿಯನ್ನು ಮನೆವರೆಗೆ ಹಿಂಬಾಲಿಸುತ್ತಿದ್ದ ವಿಕೃತ ಕಳ್ಳ ಪೊಲೀಸರ ವಶಕ್ಕೆ!

Spread the love

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.ಕೋಲಾರ (Kolar) ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.

ಜ.17ರಂದು ಹಾಸನದ (Hassan) 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ಮೂರು ದಿನಗಳ ಬಳಿಕ ಆಗಂತುಕನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *