Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

Spread the love

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಕಾರಿನ ಹಿಂಭಾಗ ಕಾಡಾನೆ ದಾಳಿಯಿಂದ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿದ್ದ ಮಹಮ್ಮದ್ ಜಾಹಿದ್ ತಾಯಿ, ಅಕ್ಕ ಅವರ ಮಕ್ಕಳು ಕಿರುಚಾಡಿದ್ದಾರೆ. ಆದರೂ ಸ್ಥಳದಿಂದ ಕದಲದ ಕಾಡಾನೆ, ಕಾರಿನ ಬಳಿಯೇ ಕೆಲಕಾಲ ನಿಂತಿದೆ.

ಜಾಹಿದ್ ಕೂಡಲೇ ಪಾರ್ಕಿಂಗ್ ಲೈಟ್ ಆನ್‌ ಮಾಡಿದ್ದಾರೆ. ಬೆಳಕನ್ನು ಕಂಡು ಕಾಡಾನೆ ಕಾರಿನಿಂದ ಸ್ವಲ್ಪ ದೂರ ಹೋಗಿ ನಿಂತಿದೆ. ನಂತರ ಆನೆ ಕಾರ್ಯಪಡೆಗೆ (ಇಟಿಎಫ್) ಮಾಹಿತಿ ನೀಡಿದ್ದರು. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕಾಗಮಿಸಿದ ಇಟಿಎಫ್ ಸಿಬ್ಬಂದಿ, ಪಟಾಕಿ ಸಿಡಿಸಿ ಕಾಡಾನೆಯನ್ನು ಅರಣ್ಯಕ್ಕೆ ಕಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *