ವಿದ್ಯಾರ್ಥಿನಿಯರಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬಳ್ಳಾರಿಯಲ್ಲಿ ಪೋಕ್ಸೋ (POCSO) ಕೇಸ್ ದಾಖಲು!

ಬಳ್ಳಾರಿ : ಬಳ್ಳಾರಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂಡೂರು ತಾಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಜಂಬಣ್ಣ(58) ಬಂಧಿತ ಮುಖ್ಯಶಿಕ್ಷಕ.

ಮುಖ್ಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ಮಕ್ಕಳನ್ನು ವಿಚಾರಿಸಿದ್ದಾರೆ. ಮಕ್ಕಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಸಂಡೂರು ಠಾಣೆಯ ಪೊಲೀಸರು ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.