Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿತ್ರೀಕರಣದ ವೇಳೆ ಹೃದಯಾಘಾತ: ನಿರ್ದೇಶಕ-ಸಂಗೀತ ನಿರ್ದೇಶಕ ಸಂಗೀತ್‌ ಸಾಗರ್‌ ವಿಧಿವಶ!

Spread the love

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ (Sangeeth Sagar) ಅವರು ಸಾವನ್ನಪ್ಪಿದ್ದಾರೆ.

ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್‌ ಸಾಗರ್‌ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್‌ ಹೇಳಿದ್ದರು. ಆ ವೇಳಗಾಗಲೇ ಸುಸ್ತಾಗಿ ಸಂಗೀತ್‌ ಸಾಗರ್‌ ಕುಸಿದಿದ್ದರು.

ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು.

20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ನಾಳೆ ಕುಂಬಳಕಾಯಿ ಶಾಸ್ತ್ರ ಮಾಡಿ ಕೊನೆಯ ಚಿತ್ರೀಕರಣ ಮಾಡಬೇಕಿತ್ತು.


Spread the love
Share:

administrator

Leave a Reply

Your email address will not be published. Required fields are marked *