Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ: ಕುಂಟೆಯಲ್ಲಿ ಮುಳುಗಿ ತಾಯಿ-ಮಗಳು ಸಾ*ವು!

Spread the love

ಚಿಕ್ಕಬಳ್ಳಾಪುರ: ಕುಂಟೆಯಲ್ಲಿ ಮುಳುಗಿ ತಾಯಿ ಹಾಗೂ ಮಗಳು (Mother -Daughter) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಬನಶಂಕರಿ ನಿವಾಸಿಗಳಾದ ಸಲ್ಮಾ (37) ಹಾಗೂ ಅವರ ಮಗಳು ಸಾದಿಕಾ (14) ಮೃತಪಟ್ಟ ದುರ್ದೈವಿಗಳು. ಮೂಲತಃ ನಿಮ್ಮಕಾಯಲಹಳ್ಳಿ ಗ್ರಾಮದವರಾಗಿದ್ದ ಸಲ್ಮಾ ಅವರು ತವರು ಗ್ರಾಮಕ್ಕೆ ಮಗಳೊಂದಿಗೆ ಬಂದಿದ್ದರು. ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ಕುಂಟೆಯ ಬಳಿ ವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕುಂಟೆಯ ಬಳಿ ಇದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಮಗಳು ಸಾದಿಕಾ ನೀರಿಗೆ ಬಿದ್ದಿದ್ದಾಳೆ. ಮಗಳನ್ನು ರಕ್ಷಿಸುವ ಉದ್ದೇಶದಿಂದ ತಾಯಿ ಸಲ್ಮಾ ಕೂಡಲೇ ನೀರಿಗೆ ಇಳಿದಿದ್ದಾರೆ. ಆದರೆ ಕುಂಟೆಯ ಆಳದ ಅರಿವಿಲ್ಲದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ತಾಯಿ-ಮಗಳ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *