ಮಂಗಳೂರಿನಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಸ್ಥಿತಿ

ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದೆ.

ಮಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಪ್ಲೈ ಓವರ್ ಕೆಳಗಡೆ ಕೃತಕ ನೆರೆ ಉಂಟಾಗಿದೆ. ಮೊನ್ನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನೇತ್ರಾವತಿ, ಕುಮಾರಧಾರ ನದಿಗಳ ನೀರಿನ ಮಟ್ಟ ಏರಿಕೆ ಕಂಡಿದೆ.
ಇನ್ನೂ ಎರಡು ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೃತಕ ನೆರೆಯಿಂದ ಶಾಲಾ ವಿದ್ಯಾರ್ಥಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು.
