Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರಾವಳಿಯಲ್ಲಿ ಭಾರಿ ಮಳೆಯ ಎಚ್ಚರಿಕೆ: ಮೇ 25ರಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ

Spread the love

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮೇ 25ರಿಂದ ಮಳೆ ಜೋರಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಶುರುವಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದು ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ,ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಮೇ 25ರ ಬಳಿಕ ಈ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದೆ.

ಕದ್ರಾ, ಕಾರವಾರ, ಹೊನ್ನಾವರ, ಗೇರುಸೊಪ್ಪ, ಮಂಕಿ, ಚಿಂಚೋಳಿ, ಉಡುಪಿ, ಪುತ್ತೂರು, ಲೋಂಡಾ, ಪಣಂಬೂರು, ಆಗುಂಬೆ, ತ್ಯಾಗರ್ತಿ, ಯಲ್ಲಾಪುರ, ಮಾಣಿ, ಜೋಯ್ಡಾ, ಇಂಡಿ, ರಬಕವಿ, ಸೇಡಬಾಳ, ಹುಬ್ಬಳ್ಳಿ, ಬಾದಾಮಿ, ಮಹಾಲಿಂಗಪುರ, ಕೆರೂರು, ಅಥಣಿ, ಮುಲ್ಕಿ, ಬೀದರ್, ಔರಾದ್, ನಾರಾಯಣಪುರ, ಖಾನಾಪುರ, ಕಲಘಟಗಿ, ಮುದ್ದೇಬಿಹಾಳ, ಕುಷ್ಟಗಿ, ಯಲಬುರ್ಗಾ, ಹುನಗುಂದ, ಭಾಗಮಂಡಲ, ಹುಂಚದಕಟ್ಟೆ, ದಾವಣಗೆರೆ, ಕಮ್ಮರಡಿ, ಜಯಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಗದಗದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *