ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಸಾರ್ವಜನಿಕರಿಗೆ ಎಚ್ಚರಿಕೆ ಕರೆ

ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ಓಪನ್ ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಎಚ್ಚರಿಕೆ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರಬೇಕು ತಿಳಿಸಿದೆ.

ಮಲೆನಾಡಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ
ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ 2 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 21ರ ಬುಧವಾರದಂದು ರೆಡ್ ಅಲರ್ಟ್ ಹಾಗೂ ಮೇ 22ರ ಗುರುವಾರದಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
