Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭದ್ರಾವತಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ

Spread the love

ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ದಕ್ಷಿಣ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 11ರಿಂದ ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಬಹುದು. ಆಗಾಗ ಸ್ವಲ್ಪ ಬಿಸಿಲು ಕಾಣಬಹುದು.

ಮಲೆನಾಡು: ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆದ್ರೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು, ಅಲ್ಲಲ್ಲಿ ಆಗಾಗ ಸ್ವಲ್ಪ ಮೋಡದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಮುಂದಿನ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೆ ಸೆಪ್ಟೆಂಬರ್ 10 ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಸಿಂದಗಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಬಹುದು.

ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 15ರಂದು ಈ ವಾಯುಭಾರ ಕುಸಿತವು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.


Spread the love
Share:

administrator

Leave a Reply

Your email address will not be published. Required fields are marked *