ಹೈಕಮಾಂಡ್ ಅವಕಾಶ ನೀಡಿದರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರೆಡು ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಇರು ಎಂದರೆ ಇರುತ್ತೇನೆ, ಮುಂದುವರಿಯಿರಿ ಎಂದರೆ ಮುಂದುವರೆಯುತ್ತೇನೆ. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಅವಕಾಶ ಸಿಕ್ಕರೆ ಇನ್ನೆರಡು ಬಜೆಟ್ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಅವರೇ ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಹೇಳಿದರು.ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರೆಡು ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಇರು ಎಂದರೆ ಇರುತ್ತೇನೆ, ಮುಂದುವರಿಯಿರಿ ಎಂದರೆ ಮುಂದುವರೆಯುತ್ತೇನೆ. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಅವಕಾಶ ಸಿಕ್ಕರೆ ಇನ್ನೆರಡು ಬಜೆಟ್ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಅವರೇ ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಯಾರೋ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದರು.
ಮೈಸೂರಿನ ಜನರಷ್ಟೇ ಅಲ್ಲ ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್’ ಎಂದರು.
ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ:
ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಸಾಲ ಮಾಡಿದ್ದೇನೆ. ಆದರೆ ಆರ್ಥಿಕ ಶಿಸ್ತಿನ ಇತಿಮಿತಿಯಲ್ಲೇ ಸಾಲ ಮಾಡಿದ್ದೇವೆ. ಈ ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ. ಅನಗತ್ಯವಾಗಿ ಅಥವಾ ಹೆಚ್ಚಾಗಿ ಸಾಲ ಮಾಡಿದ್ದಾರೆ ಎಂಬ ಆರೋಪಗಳೆಲ್ಲವೂ ಸುಳ್ಳು ಮಿತಿಯೊಳಗೇ ಸಾಲ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.
ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಸಾಲ ಮಾಡಿದ್ದಾರೆ ಎಂಬುದು ರಾಜ್ಯದ ಬಿಜೆಪಿ ನಾಯಕರಿಗೆ ಗೊತ್ತಾ? ಅವರೂ ಸಾಕಷ್ಟು ಸಾಲ ಮಾಡಿದ್ದಾರೆ. ಬಿಜೆಪಿಯವರು ಆರ್ಥಿಕ ಶಿಸ್ತಿನ ಬಗ್ಗೆ ಕಾಯ್ದೆ -ಕಾನೂನುಗಳನ್ನು ಓದಿಕೊಳ್ಳಬೇಕು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಡಾ.ಡಿತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್ ಮುಖಂಡ ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.