Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತಿರುವನಂತಪುರಂನಲ್ಲಿ ಹೈಡ್ರಾಮಾ: ಇಡಿ ಶೋಧದ ವೇಳೆ ಭಾರಿ ಹಿಂಸಾಚಾರ!

Spread the love

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು.
ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೂ ಮೊದಲು, ಕಣ್ಣೂರಿನಲ್ಲಿರುವ ಪಿಣರಾಯಿ ವಿಜಯನ್ ಅವರ ನಿವಾಸ ಮತ್ತು ಕೋಝಿಕ್ಕೋಡ್‌ನ ಕೊಟ್ಟುಲಿಯಲ್ಲಿರುವ ಮೊಹಮ್ಮದ್ ರಿಯಾಸ್ ಅವರ ನಿವಾಸದಲ್ಲಿ ಶೋಧ ಕಾರ್ಯ ಪೂರ್ಣಗೊಂಡಿತ್ತು. ಕೋಝಿಕ್ಕೋಡ್‌ನಲ್ಲಿ ಪೊಲೀಸರು ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಘರ್ಷಣೆ ಭುಗಿಲೆದ್ದಿತು. ನಂತರ ನಾಯಕರು ಮಧ್ಯಪ್ರವೇಶಿಸಿ ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತಂದರು. ಇಡಿ ಶೋಧ ಕಾರ್ಯಾಚರಣೆ ಸುಮಾರು 8 ಗಂಟೆಗಳ ಕಾಲ ನಡೆಯಿತು.


Spread the love
Share:

administrator

Leave a Reply

Your email address will not be published. Required fields are marked *