Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ರಸ್ತೆಯಲ್ಲಿ ಅತೀ ವೇಗದ ಕಾರು ಸವಾರಿ: ರಿಕ್ಕಿ ರೈ ನಿವಾಸದಲ್ಲಿದ್ದ ಲ್ಯಾಂಬೋರ್ಗಿನಿ ವಶಕ್ಕೆ

Spread the love

ಬೆಂಗಳೂರು: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್‌ಟಿಒಗೆ ಪತ್ರ ಬರೆದಿದ್ದಾರೆ. ಅಲ್ಲದೆ, ರಿಕ್ಕಿ ರೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚಾಲಕನ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *