ಹಿಮಾಚಲ ಪ್ರದೇಶ: ಚಂಬಾ ಜಿಲ್ಲೆಯಲ್ಲಿ ಆಳವಾದ ಕಂದಕಕ್ಕೆ ಉರುಳಿದ ಎಸ್‌ಯುವಿ ಕಾರು; ಏಳು ಮಂದಿ ಸ್ಥಳದಲ್ಲೇ ಸಾ*ವು!

ಶಿಮಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಎಸ್ ಯುವಿ ಕಾರೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಸ್ತುಂದ್-ಹಮಾಲ್ ಮಾರ್ಗದ ಛತ್ರಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂತ್ರಸ್ತರು ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರರಲ್ಲಿ ಆರು ಪ್ರಯಾಣಿಕರು ಮತ್ತು ಓರ್ವ ಡ್ರೈವರ್ ಸೇರಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
