ಹಿಂದೂ ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸಲು ಒತ್ತಾಯ

ಕಲಬುರಗಿ:ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಹಿಂದೂ ವಿದ್ಯಾರ್ಥಿನಿಯರಿಗೆ ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರ ಮೇಲೆ ಆರೋಪ ಮಾಡಲಾಗಿದೆ.

ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರು ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಹಲವು ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದರು. ಈ ಪ್ರವಾಸದಲ್ಲಿ ಅವರು ಮುಸಲ್ಮಾನರಿಗೆ ಸಂಬಂಧಿಸಿದ ಸ್ಥಳಗಳಿಗೆ ಹೆಚ್ಚು ಭೇಟಿ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಕುರಿತು ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಟ್ಟು ನಾರಾಯಣ ಅವರಿಗೆ ದೂರು ನೀಡಿದ್ದಾರೆ.