Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೋಳಿ ಪಾರ್ಟಿಯ ವಿಷಾಹಾರ ದುರಂತ: ಮತ್ತೊರ್ವ ವಿದ್ಯಾರ್ಥಿ ಸಾವು

Spread the love

ಮಳವಳ್ಳಿಯಲ್ಲಿ ವಿದ್ಯಾರ್ಥಿಗಳ ವಿಷಾಹಾರ ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿಕೆ ಆಗಿದೆ. ಚಿಕಿತ್ಸೆ ಫಲಿಸದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ನಾಮೀಬಂತೈ ಕೊನೆಯುಸಿರೆಳೆದಿದ್ದಾನೆ.
ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ನಡೆದಿತ್ತು. ಮೇಘಾಲಯ ಮೂಲದ ಕೇರ್ ಲಾಂಗ್ (14) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದ, ಇದೀಗ ನಾಮೀಬಂತೈ (12) ಎಂಬ ವಿದ್ಯಾರ್ಥಿ ಕೂಡ ಮೃತಪಟ್ಟಿದ್ದಾನೆ.

ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ!

ಮಳವಳ್ಳಿಯಲ್ಲಿ ವಿದ್ಯಾರ್ಥಿಗಳ ವಿಷಾಹಾರ ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿಕೆ ಆಗಿದೆ. ಮೃತ ವಿದ್ಯಾರ್ಥಿ ನಾಮೀಬಂತೈನನ್ನು ನಿನ್ನೆ ಮಂಡ್ಯ ಮಿಮ್ಸ್ ನಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ‌ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ 38 ವಿದ್ಯಾರ್ಥಿಗಳನ್ನ ಮಂಡ್ಯ ಮಿಮ್ಸ್ ಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರನ್ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಕೂಡ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಕೂಡ ಹೆಚ್ಚಾಗು ಸಾಧ್ಯತೆ ಇದೆ ಎನ್ನಲಾಗ್ತಿದೆ. 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಡ್ಯ ಮಿಮ್ಸ್​ ನಲ್ಲಿ ಚೇತರಿಸಿಕೊಳ್ತಿದ್ದಾರೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, 1989 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಯು ಹಾಸ್ಟೆಲ್ ನಡೆಸಲು ಪರವಾನಗಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಶಾಲಾ ಕಟ್ಟಡದ ಮೊದಲ ಮಹಡಿಯಲ್ಲಿ ಮಕ್ಕಳಿಗೆ ಶೌಚಾಲಯ ಸೇರಿದಂತೆ ಸರಿಯಾದ ಮೂಲಸೌಕರ್ಯಗಳಿಲ್ಲದೆ ಆಡಳಿತ ಮಂಡಳಿಯು ಹಾಸ್ಟೆಲ್ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿತ್ತು ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *