Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂತ್ರಾಲಯದ ಬಳಿ ಭೀಕರ ಅಪಘಾತ: ಲಾರಿ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಚಿಕ್ಕಮಗಳೂರು ಮೂಲದ ಎಂಟು ಭಕ್ತರ ಸಾ*ವು

Spread the love

ರಾಯಚೂರು/ಮಂತ್ರಾಲಯ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ತೆರಳುತ್ತಿದ್ದ  ಅಶೋಕ್ ಲೇಲ್ಯಾಂಡ್ ದೋಸ್ತ್ ಗೂಡ್ಸ್​​ ವಾಹನ ಹಾಗೂ ಫ್ಲೈಆಶ್ (Fly-ash) ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ.

ಚಿಕ್ಕಮಗಳೂರಿನಿಂದ ಒಟ್ಟು 21 ಮಂದಿ ಭಕ್ತರು  ಗೂಡ್ಸ್ ವಾಹನದಲ್ಲಿ ಮಂತ್ರಾಲಯಕ್ಕೆ ಹೊರಟಿದ್ದರು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮಂತ್ರಾಲಯದ ಹತ್ತಿರ ತಲುಪುತ್ತಿದ್ದಂತೆ, ಬೀದರ್‌ನಿಂದ ತುಮಕೂರಿಗೆ ತೆರಳುತ್ತಿದ್ದ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನ ಅಪ್ಪಚ್ಚಿಯಾಗಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಅಮೃತ, ತೇಜಸ್ವಿನಿ, ಧನ್ಯ, ದೀಪಿಕಾ, ದೀಕ್ಷಿತಾ, ಪ್ರತಾಪ್, ಕುಮಾರ್ ಮತ್ತು ಯಶೋದಮ್ಮ ಎಂದು ಗುರುತಿಸಲಾಗಿದೆ. ಮೃತರಲ್ಲಿ ಮೂರು ವರ್ಷದ ಮಗು, ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಗಾಯಗೊಂಡಿರುವ ಉಳಿದ 13 ಜನರಿಗೆ ಎಮಿಗನೂರು ಹಾಗೂ ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು.

ಅಪಘಾತದ ರಭಸಕ್ಕೆ ಜನರಿದ್ದ ಗೂಡ್ಸ್ ವಾಹನದ ಎದುರುಗಡೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ, ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಜಾಗದಲ್ಲಿ ಪಲ್ಟಿಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಎಮ್ಮಿಗನೂರು ಡಿವೈಎಸ್​ಪಿ ಭಾರ್ಗವಿ, ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್​ಪಿ, ಎಮ್ಮಿಗನೂರು ಸಬ್‌ಡಿವಿಷನ್ ವ್ಯಾಪ್ತಿಯ ಧರ್ಮಪುರಂ ಟೋಲ್ ಪ್ಲಾಜಾ ದಾಟಿದ ನಂತರ, ಅಂದಾಜು 10-12 ಕಿಲೋಮೀಟರ್ ದೂರದ ಚಿಲಕಲಡೋನ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.​ ಬೀದರ್‌ನಿಂದ ತುಮಕೂರಿಗೆ ತೆರಳುತ್ತಿದ್ದ ಫ್ಲೈಆಶ್ (Fly-ash) ಲಾರಿ ಹಾಗೂ ಎದುರು ದಿಕ್ಕಿನಿಂದ ಮಂತ್ರಾಲಯದ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನನ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದ ಏಳು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಒಬ್ಬರು ಸುರಕ್ಷಿತವಾಗಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯ ಬಳಿಕ ತಿಳಿಯಲಿದೆ ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *