Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾವೇರಿಯಲ್ಲಿ ಬಸ್–ಲಾರಿ ನಡುವೆ ಭೀಕರ ಡಿಕ್ಕಿ: ಗಾಯಾಳುಗಳು ಆಸ್ಪತ್ರೆಗೆ ದಾಖಲು!

Spread the love

ಹಾವೇರಿ: ಬ್ಯಾಡಗಿ ತಾಲೂಕಿನ ಛತ್ರದ ಬಳಿ ಪ್ರವಾಸಿಗರಿದ್ದ ಬಸ್‌ (Bus), ಲಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಪ್ರವಾಸಕ್ಕೆ ಬಂದಿದ್ದ ಬಸ್‌ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ (Maharashtra) ವಾಪಸ್‌ ಆಗುತ್ತಿತ್ತು. ಈ ವೇಳೆ ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *