Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೋಸ್ನಿಯಾದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ನಾಲ್ವರು ಸಿಬ್ಬಂದಿ ಸಾ*ವು!

Spread the love

ಸಾರಾಯೇವೋ: ಬೋಸ್ನಿಯಾ ಮತ್ತು ಹರ್ಜೆಗೋವಿನಾ ನಡುವೆ ಶಾಂತಿಪಾಲನಾ ಕಾರ್ಯಾಚರಣೆ ನಡೆಸುತ್ತಿದ್ದ ಇಟಾಲಿಯನ್ ಸೇನೆಗೆ ಸೇರಿದ ‘ಸಿಎಚ್-47 ಚಿನೂಕ್’ (CH-47 Chinook) ಹೆಲಿಕಾಪ್ಟರ್ ಪತನಗೊಂಡಿದೆ. ಈ ದುರಂತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಯುರೋಪಿಯನ್ ಒಕ್ಕೂಟದ ಪಡೆ (EUFOR) ತಿಳಿಸಿದೆ.

ಅ.29 ರಂದು ಬ್ರ್ಕೊ (Brcko) ಸಮೀಪದ ಗೊರೈಸ್ (Gorice) ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಗಾಯಗೊಂಡ 11 ಸಿಬ್ಬಂದಿ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಹೆಲಿಕಾಪ್ಟರ್‌ ಪತನಗೊಳ್ಳುತ್ತಿದ್ದಂತೆ ಬೋಸ್ನಿಯಾ ಮತ್ತು ಹರ್ಜೆಗೋವಿನಾದ ತುರ್ತು ಸೇವಾ ಸಿಬ್ಬಂದಿ ಹಾಗೂ EUFOR ನ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿ ಬ್ರ್ಕೊದಲ್ಲಿರುವ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.

ಈ ಅಪಘಾತದಲ್ಲಿ ಯಾವುದೇ ನಾಗರಿಕರಿಗೆ ಗಾಯಗಳಾಗಿಲ್ಲ ಮತ್ತು ನಾಗರಿಕ ಮೂಲಸೌಕರ್ಯ, ಆಸ್ತಿಪಾಸ್ತಿ ಅಥವಾ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿ, ಅದು ದೃಢಪಟ್ಟ ಬಳಿಕ ಹಂಚಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಿಬ್ಬಂದಿಯ ಗುರುತು ಅಥವಾ ರಾಷ್ಟ್ರೀಯತೆಯ ಬಗ್ಗೆ ತಪ್ಪು ಮಾಹಿತಿ ಹರಡದಂತೆ ಸಾರ್ವಜನಿಕರಲ್ಲಿ EUFOR ಮನವಿ ಮಾಡಿದೆ. ಅಧಿಕೃತ ಮಾಹಿತಿಯನ್ನು ತಮ್ಮ ಮಾಧ್ಯಮಗಳಿಂದ ಪಡೆಯುವಂತೆ ಸೂಚಿಸಲಾಗಿದೆ. ಈ ಹೆಲಿಕಾಪ್ಟರ್ ಬೋಸ್ನಿಯಾ ಮತ್ತು ಹರ್ಜೆಗೋವಿನಾದಲ್ಲಿ ಯುರೋಪಿಯನ್ ಒಕ್ಕೂಟದ ಶಾಂತಿಪಾಲನಾ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *