ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾ*ವು!

ಬೀದರ್: ಬೈಕ್ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು (Hulasuru) ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ನಡೆದಿದೆ.

ಬಸವಕಲ್ಯಾಣ (Basava Kalyana) ನಗರದ ಲಾಲ್ ತಲಾಬ್ ನಿವಾಸಿ 26 ವರ್ಷದ ಬಾಬಾ, ಶಹಾಪೂರ ಗಲ್ಲಿ ನಿವಾಸಿ 22 ವರ್ಷದ ಸುಮೀರ್ ಮತ್ತು ಶಾಹುಸೇನ್ ಗಲ್ಲಿ ನಿವಾಸಿ 12 ವರ್ಷದ ಬಾಲಕ ರೆಹಾನ್ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುಚಳಂಬ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ತೊಟ್ಟಿಲು ಆಟ ಆಡಿಸಿ ವಾಪಸ್ ಬಸವ ಕಲ್ಯಾಣಕ್ಕೆ ಬರುವ ವೇಳೆ ದುರ್ಘಟನೆ ಸಂಭವಿಸಿದೆ. ಒಂದೇ ಬೈಕ್ನಲ್ಲಿ ಮೂವರು ಚಲಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಬೈಕ್ಗೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಬಸವ ಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.